ಬಿಸಿಲಿನ ಹೊಡೆತಕ್ಕೆ ಬದಲಾದ ರಾಯಚೂರು ವಿ,ವಿ,ಕೆಲಸದ ಸಮಯ
ಬಿಸಿಲಿನ ಹೊಡೆತಕ್ಕೆ ಬದಲಾದ ಕಛೇರಿ ಕೆಲಸದ ಸಮಯ. ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡಿ ವಿ,ವಿ ಕುಲಸಚಿವರಾದ ಡಾ,ಶಂಕರ್ ವಿ, ಆದೇಶ ಹೊರಡಿಸಿದ್ದಾರೆ. ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗಗಳ,ಕಚೇರಿಗಳ ಕೆಲಸದ ವೇಳಾಪಟ್ಟಿಯ ಬದಲಾಗಿ 2025ರ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಸಮಯವನ್ನು ನಿಗದಿಗೊಳಿಸಲಾಗಿದೆ. ಆದ್ದರಿಂದ ಎಲ್ಲಾ ವಿಭಾಗಗಳ, ಕಚೇರಿಗಳ ಅಧಿಕಾರಿಗಳು, ಬೋಧಕೇತರ ಸಿಬ್ಬಂದಿಗಳು,ಎಲ್ಲಾ ಅಧ್ಯಯನ ವಿಭಾಗಗಳ ಡೀನರು, ಮುಖ್ಯಸ್ಥರು,ಬೋಧಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಬದಲಾದ ಸಮಯದಲ್ಲಿ ಕರ್ತವ್ಯ ನಿರ್ವಹಿಸಬೇಕೆಂದು ಸುತ್ತೋಲೆಯನ್ನು ಹೊರಡಿಸಿದ್ದಾರೆ. ವರದಿ,,,ಸುರೇಶ ಬಳಗಾನೂರು.

What's Your Reaction?






