ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಸಿರುಗುಪ್ಪ ಮೇ 15: ದರೊಡೆ ಪ್ರಕರಣದಲ್ಲಿ ಬಂದಿಸಿದ - ಆರೋಪಿ ಅಮರೇಶನನ್ನು ಪಂಚನಾಮೆಗೆಂದು ಕರೆದುಕೊಂಡ ಹೋದಾಗ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿ ಕೊಳ್ಳಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಸಿರುಗುಪ್ಪ ಠಾಣೆಯ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ ಘಟನೆ ಸಿರುಗುಪ್ಪ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆನಡೆದಿದೆ.

May 16, 2025 - 10:17
 0  69

ಪಂಚನಾಮಗೆಂದು ಆರೋಪಿಯನ್ನು ಕರೆದುಕೊಂಡು ಹೋದ ಸಂದರ್ಭದಲ್ಲಿ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಹೋದಾಗ ಆತ್ಮ ರಕ್ಷಣೆಗಾಗಿ ಸಿಪಿಐ .ವೈ. ಎಸ್ ಹನುಮಂತಪ್ಪಗುಂಡು ಹಾರಿಸಿದ್ದಾರೆ, ಆರೋಪಿ ಸ್ಥಳದಲ್ಲಿ ಕುಸಿದು ಬಿದ್ದಿದ್ದು, ಆರೋಪಿಯಿಂದ ಹಲ್ಲೆಗೊಳಗಾದ ಇಬ್ಬರು ಪೋಲೀಸ್ ಪೇದೆಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಹಿರಿಯ ಅಧಿಕಾರಿಗಳುನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

What's Your Reaction?

like

dislike

love

funny

angry

sad

wow