ರಾಯಚೂರು ವಾರ್ತಾ ಇಲಾಖೆಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ

ಮಾಹಿತಿಗೆ ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಹೊಸಮನಿ ಮೊ.9008462236 ಅಥವಾ ಪ್ರಥಮ ದರ್ಜೆ ಸಹಾಯಕರಾದ ಲಿಂಗರಾಜ್ ಮೊ:9743892080 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ರಾಯಚೂರು ವಾರ್ತಾ ಇಲಾಖೆಯ ಕಚೇರಿ

Sep 3, 2025 - 08:23
Sep 3, 2025 - 08:23
 0  60
ರಾಯಚೂರು ವಾರ್ತಾ ಇಲಾಖೆಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ

ಅಕ್ಟೋಬರ್ 2ರಂದು ನಡೆಯುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಯಚೂರ ಕಚೇರಿಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ವಿದ್ಯಾರ್ಥಿ ಯುವಜನರಲ್ಲಿ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳು 1.ಸ್ವಚ್ಚತೆಯ ಪಾಠ-ಗಾಂಧೀಜಿಯವರ ಸಂದೇಶ, 2.ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ, 3.ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು- ನನ್ನ ಕಲ್ಪನೆ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪಿಯುಸಿ ವಿದ್ಯಾರ್ಥಿಗಳು 1.ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, 2.ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ ಮತ್ತು 3.ಬದಲಾವಣೆ ನನ್ನಿಂದಲೇ ಆರಂಭ-ಗಾಂಧೀಜಿಯವರ ಪಾಠ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 100 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು 1.ಗಾಂಧೀಜಿಯವರು ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, 2.ಗಾಂಧೀಜಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ - ತತ್ವಗಳ ಹೋಲಿಕೆ, 3.ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ - ಯುವಕರಿಗೆ ಗಾಂಧೀಜಿಯವರ ಪಾಠ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು., ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು., ಆಕಾರವಾಗಿ ಬಳಸಿದ ಪರಾಮರ್ಶನ/ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ/ ಆಧಾರಗ್ರಂಥಗಳು/ಮೊಬೈಲ್‌ಗಳ ಬಳಕೆಗೆ ಅವಕಾಶ ವಿರುವುದಿಲ್ಲ., ಪ್ರಬಂಧಕಾರರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನಮೂದಿಸಿರಬೇಕು., ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ಪ್ರೌಢಶಾಲಾ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಮೂರು ಪ್ರತ್ಯೇಕ ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅಕ್ಟೋಬರ್ 2ರ ಮಹಾತ್ಮಗಾಂಧೀಜಿ ಜಯಂತಿ ಸಮಾರಂಭದಲ್ಲಿ ಜಿಲ್ಲಾಮಟ್ಟದಲ್ಲಿ ತಲಾ ಮೂರು ವಿಭಾಗಗಲ್ಲಿ ಪ್ರಥಮ 3000 ರೂ, ದ್ವಿತೀಯ 2000 ರೂ. ಮತ್ತು ತೃತೀಯ 1000 ರೂ. ನೀಡಲಾಗುತ್ತದೆ. ರಾಜ್ಯಮಟ್ಟದಲ್ಲಿ ತಲಾ ಮೂರು ವಿಭಾಗಗಳಲ್ಲಿ ಪ್ರಥಮ 31000 ರೂ, ದ್ವಿತೀಯ 21,000 ರೂ. ಮತ್ತು ತೃತೀಯ 11,000 ರೂ. ನೀಡಲಾಗುತ್ತದೆ.

ಈ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯಾ ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಮತ್ತು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಸೆಪ್ಟೆಂಬರ್ 10ರೊಳಗೆ ನಡೆಸಿ ವಿಜೇತರ ಪಟ್ಟಿಯನ್ನು ಮತ್ತು ಎಲ್ಲ ಪ್ರಬಂಧಗಳನ್ನು ಜಿಲ್ಲಾ ವಾರ್ತಾಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪತ್ರಿಕಾ ಭವನ, ಜಿಲ್ಲಾ ರಂಗಮಂದಿರದ ಹಿಂದುಗಡೆ ಇಲ್ಲಿಗೆ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದು ತಿಳಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದೆ.

ಈ ಪ್ರಬಂಧ ಸ್ಪರ್ಧೆಯು ಸೆ.10ರೊಳಗೆ ವಸತಿ ನಿಲಯಗಳಲ್ಲಿ ಸಹ ನಡೆಯುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ನಡೆಯುವ ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾಗದ ವಿದ್ಯಾರ್ಥಿಗಳು ಆಯಾ ವಸತಿ ನಿಲಯಗಳಲ್ಲಿ ನಡೆಯುವ ಸ್ಪರ್ಧೆಯಲ್ಲಿ ಪ್ರಬಂಧ ಬರೆದು, ಹೆಸರು, ಶಾಲಾ-ಕಾಲೇಜಿನ ಹೆಸರು, ತರಗತಿ, ವಿಳಾಸ ಬರೆದು ಆಯಾ ವಸತಿ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಹೊಸಮನಿ ಮೊ.9008462236 ಅಥವಾ ಪ್ರಥಮ ದರ್ಜೆ ಸಹಾಯಕರಾದ ಲಿಂಗರಾಜ್ ಮೊ:9743892080 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ರಾಯಚೂರು ವಾರ್ತಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

What's Your Reaction?

like

dislike

love

funny

angry

sad

wow