ಪೊಲೀಸರ ನಡವಳಿಕೆ ಕುರಿತು 18 ಖಡಕ್ ಮಾರ್ಗಸೂಚಿ ಹೊರಡಿಸಿದ ಡಿಜಿಪಿ: ಡಾ ಎಂ.ಎ ಸಲೀಂ

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಅನಗತ್ಯ ತೊಂದರೆ ನೀಡಬೇಡಿ ಪೊಲೀಸರ ನಡವಳಿಕೆ ಕುರಿತು 18 ಖಡಕ್ ಮಾರ್ಗಸೂಚಿ ಹೊರಡಿಸಿದ ಡಿಜಿಪಿ: ಡಾ ಎಂ.ಎ ಸಲೀಂ

Oct 27, 2025 - 07:24
 0  15
ಪೊಲೀಸರ ನಡವಳಿಕೆ ಕುರಿತು 18 ಖಡಕ್  ಮಾರ್ಗಸೂಚಿ ಹೊರಡಿಸಿದ ಡಿಜಿಪಿ: ಡಾ ಎಂ.ಎ ಸಲೀಂ
ಡಿಜಿಪಿ: ಡಾ ಎಂ.ಎ ಸಲೀಂ

ಬೆಂಗಳೂರು: ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಲು ಹಾಗೂ ಸಾರ್ವಜನಿಕರೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ಉತ್ತಮ ಅಭಿಪ್ರಾಯ ಮೂಡಬೇಕು. ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಹಾಗೂ ಘನತೆ ಕಾಣಬೇಕು ಎಂಬ ಉದ್ದೇಶದಿಂದ ಡಿಜಿ-ಐಜಿಪಿ ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿರುವ ಅಂಶಗಳೇನು?: ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಹಿನ್ನೆಲೆಯನ್ನು ಗಮನಿಸದೇ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು. ಸಾರ್ವಜನಿಕರ ಕುಂದುಕೊರತೆ ತಾಳ್ಮೆಯಿಂದ ಆಲಿಸಿ ವಿಳಂಬ ನೀತಿ ಅನುಸರಿಸದೇ ದೂರು ದಾಖಲಿಸಬೇಕು.

ಸಾರ್ವಜನಿಕರ೦ದಿಗ ಮಾತನಾಡುವಾಗ ಒರಟು ಭಾಷೆ ಬೇಡ, ಯಾವಾಗಲೂ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು. ಕರ್ತವ್ಯದ ವೇಳೆ ಅಥವಾ ಮುಗಿದ ಬಳಿಕ ನಂತರವೂ ನೈತಿಕವಾಗಿ ಇತರ-ರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ ನಿಯಮಗಳನ್ನು ಎತ್ತಿಹಿಡಿಯಬೇಕು.

ತನಿಖಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಮತ್ತು ಪ್ರತಿ ಹಂತದಲ್ಲೂ ಜವಾಬ್ದಾ-ರಿಯಿಂದ ಕಾರ್ಯನಿರ್ವಹಣೆ ಮಾಡಬೇಕು. ಯಾವುದೇ ನಾಗ-ರಿಕರಿಗೆ ಅನಗತ್ಯವಾಗಿ ತೊಂದರೆ ನೀಡಬಾರದು.

ಸಂತ್ರಸ್ತರು, ಮಹಿಳೆಯರು, ಹಿರಿಯ ನಾಗರಿಕರು ಮತ್ತು ಮಕ್ಕಳೊಂದಿಗೆ ವಿಶೇಷ ಕಾಳಜಿಯಿಂದ ಮತ್ತು ಸೂಕ್ಷತೆಯಿಂದ ವರ್ತಿಸಬೇಕು. ಸಾರ್ವಜನಿಕರ ದೂರುಗಳ ಸ್ಥಿತಿ ಮತ್ತು ಬಾಕಿ ಇರುವ ಪ್ರಕರಣಗಳ ಕುರಿತು ನಾಗರಿಕರಿಗೆ ಮಾಹಿತಿ ನೀಡಬೇಕು. ಕರ್ತವ್ಯಕ್ಕೆ ಹಾಜರಾಗುವುದು ಮತ್ತು ಅಧಿಕೃತ ಕಾರ್ಯಗಳನ್ನು ನಿರ್ವಹಿಸುವಲ್ಲಿ ಶಿಸ್ತಿನಿಂದ ಸಮಯ ಪಾಲನೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾ-ರಿಯುತವಾಗಿ ಬಳಸಿಕೊಳ್ಳಬೇಕು. ಸಾರ್ವಜನಿಕರ ಖಾಸಗಿತನ ಮತ್ತು ಘನತೆ ಗೌರವಿಸಿ, ಅಧಿಕಾರದ ದುರುಪಯೋಗ ಅಥವಾದೌರ್ಜನ್ಯದಿಂದ ದೂರವಿರಬೇಕು.

ಮಹಿಳೆಯರನ್ನು ಸಂಜೆ 6 ಗಂಟೆಯ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ මඞ්-'ವಾ ಹೇಳಿಕೆಯನ್ನು ನೀಡಲು ಕರೆತರಬಾರದು. ಮಹಿಳೆಯು ಒಂದು ವೇಳೆ ಆರೋಪಿಯಾಗಿದ್ದಲ್ಲಿ ಅಥ-'ವಾ ಸಂತ್ರಸ್ತೆಯಾಗಿದ್ದಲ್ಲಿ ಆಕೆಯನ್ನು ಮಹಿಳಾ ಪೊಲೀಸ್ ಅಧಿಕಾ-ರಿಯ ನೆರವಿನೊಂದಿಗೆ, ಮಹಿಳೆಯ ವಾಸದ ಸ್ಥಳ/ಮನೆಯಲ್ಲಿಯೇ ಮಹಿಳೆಯರು ವಿಚಾರಣೆ ಮಾಡಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅವ-ರಿಗೆ ಯಾವುದೇ ಅವಮಾನಕ್ಕೆ ಒಳಗಾಗದಂತೆ ನೋಡಿಕೊಳ್ಳಬೇಕು ಮತ್ತು ಅವರನ್ನು ಪೊಲೀಸ್ ಠಾಣೆಯಲ್ಲಿ ಇರಿಸಬಾರದು. ಬದಲಿಗೆ ಅವರನ್ನು ರಾಜ್ಯ ಗೃಹ (ಸ್ಟೇಟ್ ಹೋಮ್) ಆಶ್ರಯ ತಾಣಗಳಲ್ಲಿ ಇರಿಸಬೇಕು ಸಲೀಂ ಅವರು ತಿಳಿಸಿದ್ದಾರೆ.

What's Your Reaction?

like

dislike

love

funny

angry

sad

wow