ಧರ್ಮಸ್ಥಳ ಪ್ರಕರಣ: ದಿಢೀರನೆ ಎಸ್‌ಐಟಿ ಸ್ಥಾಪನೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: 'ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಆರೋಪಗಳ ಕುರಿತ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ನೀಡಿರುವ ಹೇಳಿಕೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಪೊಲೀಸ್ ಇಲಾಖೆಯವರು ಸಲ್ಲಿಸುವ ವರದಿಯ ಆಧಾರದ ಮೇಲೆ, ಎಸ್‌ಐಟಿ ಮಾಡಬೇಕೆಂಬ ಶಿಫಾರಸು ಬಂದರೆ ರಚಿಸುತ್ತೇವೆ. ಶನಿವಾರದೊಳಗೆ ಎಲ್ಲವೂ ಗೊತ್ತಾಗಲಿದೆ' ಎಂದರು.
'ದೂರುದಾರ 10 ವರ್ಷ ತಲೆಮರೆಸಿಕೊಂಡಿದ ಆತ,ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ. ನಾನೇ ಹೂತು ಹಾಕಿದ್ದೇನೆ ಎಂದೆಲ್ಲಾ ಹೇಳಿದ್ದಾನೆ. ಆ ಜಾಗಕ್ಕೆ ಕರೆದುಕೊಂಡು ಹೋದರೆ ಹೆಣಗಳನ್ನು ತೋರಿಸುತ್ತೇನೆ ಎಂದೂ ಹೇಳಿದ್ದಾನೆ. ಪೊಲೀಸರು ಏನು ಹೇಳುತ್ತಾರೆಯೋ ನೋಡೋಣ" ಎಂದು ಹೇಳಿದರು.
What's Your Reaction?






