ಈದ್ ಮಿಲಾದ್ ಹಬ್ಬ: ಶಾಂತಿ–ಸೌಹಾರ್ದತೆಯಿಂದ ಆಚರಣೆ ಮಾಡಲು ಎಸ್‌ಪಿ ಸೂಚನೆ
ರಾಯಚೂರು ಸೆ 03:
ಬುಧವಾರ ಸಂಜೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಶ್ರೀ ಪುಟ್ಟಮಾದಯ್ಯ ಎಂ ಐಪಿಎಸ್ ಪೊಲೀಸ್ ಅಧೀಕ್ಷಕರು ರಾಯಚೂರು ರವರ ಅಧ್ಯಕ್ಷತೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಮುಖಂಡರೊಂದಿಗೆ ಶಾಂತಿಪಾಲನ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಎಸ್.ಪಿ ಪುಟ್ಟಮಾದಯ್ಯ ಎಂ ರವರು ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದಿಂದ ಸುಸೂತ್ರವಾಗಿ ಆಚರಿಸಬೇಕು ಎಂದು ಒತ್ತಾಯಿಸಿದರು. ಕಾನೂನಿನ ಚೌಕಟ್ಟಿನೊಳಗೆ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿ, ಎಲ್ಲಾ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಭೆಯಲ್ಲಿ ಹಲವಾರು ಮುಸ್ಲಿಂ ಮುಖಂಡರು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
What's Your Reaction?






