ಗೌರಿ ಗಣೇಶನ ಹಬ್ಬ ಶಾಂತಿಯುತವಾಗಿ ಆಚರಿಸಿ: ಜಿ.ಹರೀಶ ಎ ಎಸ್ ಪಿ

ಮಸ್ಕಿ : ತಾಲೂಕಿನಲ್ಲಿ ಗೌರಿ–ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು ಎಂದು ರಾಯಚೂರಿನ ಹೆಚ್ಚುವರಿ  ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಜಿ. ಹರೀಶ್ ಹೇಳಿದರು.

Aug 20, 2025 - 08:56
 0  25
ಗೌರಿ ಗಣೇಶನ ಹಬ್ಬ ಶಾಂತಿಯುತವಾಗಿ ಆಚರಿಸಿ: ಜಿ.ಹರೀಶ ಎ ಎಸ್ ಪಿ
ಜಿ.ಹರೀಶ ಎ ಎಸ್ ಪಿ ರಾಯಚೂರು
ಗೌರಿ ಗಣೇಶನ ಹಬ್ಬ ಶಾಂತಿಯುತವಾಗಿ ಆಚರಿಸಿ: ಜಿ.ಹರೀಶ ಎ ಎಸ್ ಪಿ
ಗೌರಿ ಗಣೇಶನ ಹಬ್ಬ ಶಾಂತಿಯುತವಾಗಿ ಆಚರಿಸಿ: ಜಿ.ಹರೀಶ ಎ ಎಸ್ ಪಿ

ಪಟ್ಟಣದ ಭ್ರಮಮರಾಂಬ ದೇವಸ್ಥಾನದಲ್ಲಿ  ಗಣೇಶ ಹಬ್ಬದ ಪ್ರಯುಕ್ತ ಮಂಗಳವಾರ ನಡೆದ ಶಾಂತಿ ಪಾಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಈ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಸಂಭ್ರಮದಿಂದ ಆಚರಿಸಬೇಕು ಎಂದು ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು. ಡಿಜೆ ಧ್ವನಿವರ್ಧಕವನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದರು.

ಹಬ್ಬದ ವೇಳೆ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ. ಹಿರಿಯರಿಗೆ, ಮಕ್ಕಳಿಗೆ ಮತ್ತು ಪ್ರಾಣಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಯಾ ಮಂಡಳಿ ಪ್ರಮುಖರು ಎಚ್ಚರ ವಹಿಸಬೇಕು. ಅಲ್ಲದೆ ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಹೇಳಿದರು.

ಸಾರ್ವಜನಿಕರು ಗಣೇಶನ ಮೂರ್ತಿ ರಸ್ತೆಯಲ್ಲಿ ಕೂಡಿಸಿ, ಇತರರಿಗೆ ತೊಂದರೆ ಉಂಟು ಮಾಡಬಾರದು. ಸಣ್ಣ-ಪುಟ್ಟ ಗಣೇಶನ ಮೂರ್ತಿ ಹೊರತು ಪಡಿಸಿ, ಉಳಿದಂತೆ ಎಲ್ಲರೂ ತಪ್ಪದೇ ವಿವಿಧ ಇಲಾಖೆಗಳಿಂದ ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.

ಪರವಾನಿಗೆ ಕುರಿತು ಏಕಗವಾಕ್ಷಿ ವ್ಯವಸ್ಥೆಯನ್ನು ಪೊಲೀಸ್ ಠಾಣೆ ಮತ್ತು ಆಯಾ ತಾಲೂಕು ಕೇಂದ್ರಗಳು ಮತ್ತು ಗ್ರಾಮಗಳಲ್ಲಿ ಅರ್ಜಿ ಸಲ್ಲಿಸಿದವರಿಗೆ ಪರವಾನಿಗೆ  ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಪ್ರತಿಷ್ಠಾಪಿಸುವ ಪ್ರತಿಯೊಂದು ಸ್ಥಳದಲ್ಲಿ 10 ಜನ ಸ್ವಯಂ ಸೇವಕರನ್ನು ನೇಮಕ ಮಾಡಿ ಹಾಗೂ ಕಮಿಟಿಯಲ್ಲಿ ಸದಸ್ಯರ ಕುರಿತಾದ ವರದಿ ಸಂಬಂಧಿಸಿದ ತಾಲೂಕಿನ ತಹಸೀಲ್ದಾರರಿಗೆ ಹಾಗೂ ಪೊಲೀಸ್ ಇಲಾಖೆಗೆ ನೀಡಬೇಕು.

ನಗರದ ಪ್ರತಿಯೊಂದು ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮತ್ತು ಹೋಮ್‌ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಗಣೇಶ ವಿಸರ್ಜನಾ ಹೊಂಡದ ಬಳಿ ಪರಿಣಿತ ಈಜುಗಾರರು ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಇರುವಂತೆ ಮುನ್ನಚ.ರಿಕೆ ವಹಿಸಬೇಕೆಂದು ನಿರ್ದೇಶನ ನೀಡಿದರು ನಗರದ ಪ್ರತಿಯೊಂದು ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮತ್ತು ಹೋಮ್‌ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಗಣೇಶ ವಿಸರ್ಜನಾ ಹೊಂಡದ ಬಳಿ ಪರಿಣಿತ ಈಜುಗಾರರು ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಇರುವಂತೆ ಮುನ್ನಚ್ಚರಿಕೆ ವಹಿಸಬೇಕೆಂದು ನಿರ್ದೇಶನ ನೀಡಿದರು.

 ನಂತರ ತಹಸೀಲ್ದಾರ್ ಮಲ್ಲಪ್ಪ ಯೆರಗೊಳ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮಾತನಾಡಿದರು.

ಈ ಸಂದರ್ಭದಲ್ಲಿ ಲಿಂಗಸೂರು ಡಿ ವಾಯ್ ಎಸ್ ಪಿ ದತತ್ತರಾಯ ಕಾರ್ನಡ್, ತಹಶಿಲ್ದಾರ ಡಾ.ಮಲ್ಲಪ್ಪ ಯರಗೋಳ, 

ಸಿಪಿಐ ಬಾಲಚಂದ್ರ ಲಕ್ಕಂ, ಪಿಎಸ್ಐ  ಕೆ. ರಂಗಯ್ಯ, ಮುದಗಲ್ ಪಿ ಎಸ್ ಐ  ವೆಂಕಟೇಶ ಎಮ್ ,

ಮುಖಂಡರಾದ  ಮಹಾದೇವಪ್ಪಗೌಡ ಪೊಲೀಸ ಪಾಟೀಲ, ದೊಡ್ಡಪ್ಪ ಮುರಾರಿ, ಹಿರಿಯ ಪತ್ರಕರ್ತ ಅಬ್ದುಲ್ ಅಜೀಜ್  ರಸಭೆಯ ನಾಗರಾಜ, ಜೆಸ್ಕಾಂನ ವೆಂಕಟೇಶ ಸೇರಿದಂತೆ  ಮಸ್ಕಿ ಪೊಲೀಸ್ ಸಿಬ್ಬಂದಿಗಳು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು ,ಊರಿನ ಮುಖಂಡರು ಪಾಲ್ಗೊಂಡಿದ್ದರು.

What's Your Reaction?

like

dislike

love

funny

angry

sad

wow