ಅಕ್ರಮ ಗಣಿ ತಡೆದ ಮಹಿಳಾ ಅಧಿಕಾರಿಗೆ ಅಶ್ಲೀಲ ನಿಂದನೆ ಭದ್ರಾವತಿ ಶಾಸಕ ಸಂಗಮೇಶ್ ಪುತ್ರನ ವಿರುದ್ಧ ಕೆ ಆರ್ ಎಸ್ ಮಹಿಳಾ ಘಟಕ ಆಕ್ರೋಶ ಕಾರ್ಯಕರ್ತರು ಪ್ರತಿಭಟನೆ .
ಕೆಆರ್‌ಎಸ್ ಪಕ್ಷದ ಸಂಸ್ಥಾಪಕ ರವಿಕೃಷ್ಣಾ ರೆಡ್ಡಿ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಸೋಮ ವಾರ ಪೋಸ್ಟ್ ಮಾಡಿ ಪೊಲೀಸರು ಶಾಸಕರ ಪುತ್ರನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮಹಿಳಾ ಅಧಿಕಾರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಭದ್ರಾವತಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿದ ವೇಳೆ ಜಿಲ್ಲೆ ಶಾಸಕರೊಬ್ಬರ ಪುತ್ರ ಮೊಬೈಲ್ ಮೂಲಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ವಿರುದ್ಧ ಅಶ್ಲೀಲ ಪದ ಬಳಸಿ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ.
ಈ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶಿವಮೊಗ್ಗ ಎಸ್ಪಿಗೆ ಪತ್ರ ಬರೆದು ಪ್ರಕರಣ ಸಂಬಂಧ ಸಂಪೂರ್ಣ ವರದಿ ನೀಡಲು ತಿಳಿಸಿದ್ದಾರೆ. ಜೊತೆಗೆ ಶಾಸಕ ಸಂಗಮೇಶ್ವರ್ ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಕೆ ಆರ್ ಎಸ್ ಪಕ್ಷ ಹಾಗೂ ಬಿಜೆಪಿ ಪಕ್ಷ ಒತ್ತಾಯಿಸಿದೆ.
ಮಹಿಳಾ ಅಧಿಕಾರಿಗೆ ಫೋನ್ ಮೂಲಕ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಎಂದು ಆರೋಪಿಸಿರುವ ಕೆಆರ್‌ಎಸ್ ಪಕ್ಷದ ಸಂಸ್ಥಾಪಕ ರವಿಕೃಷ್ಣಾ ರೆಡ್ಡಿ
ಕ್ರಮಕ್ಕೆ ಆಗ್ರಹಿಸಿದ್ದಾರೆ.
ಏನಿದು ಪ್ರಕರಣಃ ಭದ್ರಾವತಿಯಲ್ಲಿನ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ಭಾನುವಾರ ಮಧ್ಯರಾತ್ರಿ ದಾಳಿ ಮಾಡಿದ್ದರು. ಈ ವೇಳೆ ಮಹಿಳಾ * ಅಧಿಕಾರಿ ವಿರುದ್ದ ಮೊಬೈಲ್‌ನಲ್ಲಿ ವ್ಯಕ್ತಿಯೊಬ್ಬರು ಅಶ್ಲೀಲ ಪದ ಬಳಸಿ ಹರಿಹಾಯ್ದಿದ್ದರು.
ಕೆಆರ್‌ಎಸ್ ಪಕ್ಷದ ಸಂಸ್ಥಾಪಕ ರವಿಕೃಷ್ಣಾ
ರೆಡ್ಡಿ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಸೋಮ ವಾರ ಪೋಸ್ಟ್ ಮಾಡಿ ಪೊಲೀಸರು ಶಾಸಕರ ಪುತ್ರನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮಹಿಳಾ ಅಧಿಕಾರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಈ ವೀಡಿಯೋ ವೈರಲ್ ಆಗಿ ಶಾಸಕರ ಪುತ್ರನ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು.
What's Your Reaction?






