ಯಶಸ್ವಿನಿ ಯೋಜನೆಗೆ ಅರ್ಜಿ ಆಹ್ವಾನ ಇದರ ಸದುಪಯೋಗ ಪಡೆದುಕೊಳ್ಳಿ||ನಾಗಭೂಷಣ ಬಾರಿಕೇರ

ಮಸ್ಕಿ : ಪಟ್ಟಣದ ಸಹಕಾರಿ ಕಛೇರಿ ಯಲ್ಲಿ ಯಶಸ್ವಿನಿ ಯೋಜನೆಯಡಿ 2026-27ನೇ ಸಾಲಿಗೆ ಮುಂದುವರೆಸಲು ಪಟ್ಟಣ ಸೇರಿದಂತೆ ಸಹಕಾರಿ ವ್ಯಾಪ್ತಿಯಲ್ಲಿ ಬರುವ ಅರ್ಹ ಸದಸ್ಯರ ನೋಂದಣಿ ಪ್ರಾರಂಭಿಸಲಾಗಿದೆ.

Jan 23, 2026 - 08:23
 0  24
ಯಶಸ್ವಿನಿ ಯೋಜನೆಗೆ ಅರ್ಜಿ ಆಹ್ವಾನ ಇದರ ಸದುಪಯೋಗ ಪಡೆದುಕೊಳ್ಳಿ||ನಾಗಭೂಷಣ ಬಾರಿಕೇರ
ಸಹಕಾರ ಸಂಘದ ಅಧ್ಯಕ್ಷ ನಾಗಭೂಷಣ ಬಾರಿಕೇರ

ಈ ಯೋಜನೆಯಡಿ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯರ ನೊಂದಣಿಗೆ ಮಾರ್ಚ್ 31ರವರೆಗೆ ಅವಕಾಶವಿದೆ

ಅರ್ಜಿ ನಮೂನೆ, ಪಡಿತರ ಚೀಟಿ, ಆಧಾರ್ ಕಾರ್ಡ್, ಯೋಜನೆಗೆ ಒಳಪಡುವ ಸದಸ್ಯರ ಪ್ರತಿಯೊಬ್ಬರ ತಲಾ 1 ಭಾವಚಿತ್ರ, ಗ್ರಾಮೀಣ ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಠ 4 ಸದಸ್ಯರ ಕುಟುಂಬ ಒಂದಕ್ಕೆ ₹ 500 ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ₹ 100 ಪಾವತಿಸಬೇಕು. 

ಸಹಕಾರ ಸಂಘಗಳ ಹೊಸ ಸದಸ್ಯರ ನೋಂದಣಿ ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಗರಿಷ್ಠ 4 ಸದಸ್ಯರ ಕುಟುಂಬ ಒಂದಕ್ಕೆ ₹ 1 ಸಾವಿರ ವಂತಿಕೆ ಹಾಗೂ 4 ಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತೀಯೊಬ್ಬ ಹೆಚ್ಚುವರಿ ಸದಸ್ಯರಿಗೆ ₹ 200 ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉಚಿತ.

ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಕುಟುಂಬದ ಒಬ್ಬ ವ್ಯಕ್ತಿ ಸಂಬಂಧಪಟ್ಟ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದರೆ ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ. ನೋಂದಾಯಿತ ಸದಸ್ಯರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ₹ 5 ಲಕ್ಷದವರೆಗೆ ನೆಟ್‍ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಮಸ್ಕಿ ಸಹಕಾರಿ, ದೂರವಾಣಿ ಸಂಖ್ಯೆ 9902204028 ಅಥವಾ 8880533393 ನ್ನು ಸಂಪರ್ಕಿಸಬಹುದು ಎಂದು ಸಹಕಾರ ಸಂಘದ ಅಧ್ಯಕ್ಷ ರಾದ ನಾಗಭೂಷಣ ಬಾರಿಕೇರ, ಹಾಗೂಸ ಹಕಾರಿಯ ಕಾರ್ಯದರ್ಶಿ ಅಂದಾನೇಶ ರವರು ಪ್ರಕಟನೆಗೆ ಮೂಲಕತಿ ಳಿಸಿದ್ದಾರೆ.

What's Your Reaction?

like

dislike

love

funny

angry

sad

wow