ಮರಳು ದಂಧೆ ಕಡಿವಾಣಕ್ಕೆ ಡಿಸಿ ಸೂಚನೆ||ಅಕ್ರಮದಲ್ಲಿ ಭಾಗಿಯಾದ ಅಧಿಕಾರಿ, ಸಿಬ್ಬಂದಿ ಮೇಲೆ ಎಫ್‌ಐಆರ್: ಎಚ್ಚರಿಕೆ
ರಾಯಚೂರು, ಜ.30: ದೇವದುರ್ಗ,ಮಸ್ಕಿ, ಸಿರವಾರ, ಮಾನ್ವಿ, ಸಿಂಧನೂರ ಮತ್ತು ಲಿಂಗಸೂರ ತಾಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಅನಧಿಕೃತವಾಗಿ ಮರಳು ಸಾಗಣೆ ಕೂಡಲೇ ನಿಲ್ಲಬೇಕು. ಯಾವುದೇ ಕಡೆಗಳಲ್ಲಿ ರಾಜಾರೋಷವಾಗಿ ಮರಳು ಎತ್ತುವುದು ಕಂಡು ಬಂದಲ್ಲಿ ಅದನ್ನು ಸಹಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಹೇಳಿದ್ದಾರೆ.
ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕೋರ್ಸ್ ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಮರಳುಗಾರಿಕೆ
ಎಷ್ಟೇ ಪ್ರಭಾವಿಗಳಾಗಿರಲಿ, ಯಾರೇ ಇರಲಿ ಅಂತಹವರ ಮೇಲೆ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಮಾಫಿಯಾದಲ್ಲಿ ಯಾವುದೇ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗಿಯಾಗಕೂಡದು. ಅಕ್ರಮ ಮರಳು ದಂಧೆಯಲ್ಲಿ ಭಾಗಿಯಾಗಿ, ಅಧಿಕಾರಿಗಳು ಮತ್ತು ಸಿಬ್ಬಂದಿಯು ನೋಡಿಯೂ ನೋಡದಂತೆ ಇದ್ದರೆ, ಅಕ್ರಮ ಮರಳು ದಂಧೆಗೆ ಕುಮ್ಮಕ್ಕು ನೀಡಿದರೆ ಅಂತಹ ಅಧಿಕಾರಿಗಳು ಮತ್ತು
ಪ್ರಕರಣವು ಗಂಭೀರವಾಗಿದ್ದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಕ್ರಮ ಮರಳು ಸಾಗಣೆಗೆ ಕಡಿವಾಣ ಹಾಕಬೇಕು ಎಂಬುದು ದೇವದುರ್ಗ ತಾಲೂಕಿನ ಒಕ್ಕೊರಲಿನ ಒತ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವಾಗಿ ದೇವದುರ್ಗದಲ್ಲಿ ವಿಶೇಷ ಕಾರ್ಯಾಚರಣೆಗಿಳಿಯಬೇಕು. ದೇವದುರ್ಗ ಮತ್ತು ಮಾನವಿಯಲ್ಲಿ ಆರ್ಟಿಓ ಅಧಿಕಾರಿಗಳು ವಿಶೇಷ ಡ್ರೈವ್ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ವಿವಿಧೆಡೆ ಕೂಡಲೇ ಚೆಕ್ಟೋಸ್ಟ್ ಸ್ಥಾಪನೆಗೆ ಕ್ರಮವಹಿಸಿ ಅಕ್ರಮ ಮರಳು ಸಾಗಣೆ ತಡೆಯಬೇಕು. ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮೂರು ತಂಡಗಳಾಗಿ ಚೆಕ್ಟೋಸ್ಟ್ ನಲ್ಲಿ ನಿಗಾ ಇಡಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಯಾವುದೇ ಮೇಸೇಜ್ ಪಾಸಾಗದಂತೆ ಜಾಗರೂಕತೆ ವಹಿಸಿ ಬೇರೆ ಬೇರೆ ಭಾಗದ ಅಧಿಕಾರಿ-ಸಿಬ್ಬಂದಿಯನ್ನು ಚೆಕೋಸ್ಟ್‌ಗಳಿಗೆ ನಿಯೋಜನೆ ಮಾಡಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ ಬಸವಣೆಪ್ಪ ಕಲಶೆಟ್ಟಿ ಡಾ.ಹಂಪಣ್ಣ ಸಜ್ಜನ, ದೇವದುರ್ಗ, ಲಿಂಗಸೂರು, ಅರಕೇರಾ, ಸಿರವಾರ, ಮಸ್ಕಿ, ಸಿಂಧನೂರ ಮತ್ತು ಮಾನ್ವಿ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಮುತ್ತಣ್ಣ ಅವರು ಸಭೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಗುರಿ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.
What's Your Reaction?



