ಮಾನ್ವಿ ತಾಲೂಕಿನ ವಿವಿಧ ಗ್ರಾಮಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ

ಮಾನ್ವಿ : ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕಿನ ವಿವಿಧ ಗ್ರಾಮಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಾ.ಪಂ. ಇ.ಓ. ಖಾಲೀದ್ ಅಹಮ್ಮದ್ ಮಾತನಾಡಿ ತಾಲೂಕಿನ ಎಲ್ಲಾ ೧೭ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕೂಲಿ ಕಾರ್ಮಿಕರಿಂದ ನಮೂನೆ-೦೬ರಲ್ಲಿ ಅರ್ಜಿ ಸ್ವೀಕರಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕೇಲಸ ನೀಡಬೇಕು ಹಾಗೂ ಕೇಲಸದ ಸ್ಥಳದಲ್ಲಿ ಪ್ರತಿದಿನ ಎರಡು ಬಾರಿ ಎನ್.ಎಂ.ಎA.ಎಸ್ ಹಾಜರಾತಿಯನ್ನು ಕಡ್ಡಾಯವಾಗಿ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಮೂಲಕ ಪಡೆಯಬೇಕು ಹಾಗೂ ಕೂಲಿ ಕಾರ್ಮಿಕರಿಗೆ ಅಗತ್ಯವಾದ ಕುಡಿಯುವ ನೀರಿನ ವ್ಯವಸ್ಥೆ,ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಇಲ್ಲದೆ ಇರುವ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮೇ ೩೧ ರವರಿಗೆ ಅವಕಾಶ ಮಾಡಿಕೊಡಲಾಗಿತ್ತು ಎಷ್ಟು ವಸತಿ ರಹಿತ ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಲಾಗಿರುವ ಬಗ್ಗೆ ಸರ್ವೆ ನಡೆಸಿರುವ ಕುರಿತು ಮಾಹಿತಿ ಪಡೆದರು. ಗ್ರಾಮ ಪಂಚಾಯಿತಿ ವತಿಯಿಂದ ೨೦೨೫-೨೬ ನೇ ಸಾಲಿನ ಬೇಡಿಕೆಗೆ ಅನುಗುಣವಾಗಿ ಕರ ವಸೂಲಿ ಮಾಡಿರುವಬಗ್ಗೆ ಕರ ವಸುಲಿಗಾರರಿಂದ ಮಾಹಿತಿ ಪಡೆದರು
ಸಭೆಯಲ್ಲಿ ತಾ.ಪಂ. ಸಹಾಯಕ ನಿರ್ದೇಶಕರಾದ ದೀಪ ಅರಳಿಕಟ್ಟಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ.ಗ್ರೇಡ್ -೧ ಹಾಗೂ ಗ್ರೇಡ್ -೨ ಕಾರ್ಯದರ್ಶಿಗಳು, ಗ್ರಾಮ ಪಂಚಾಯತಿ ದರ್ಜೆ ಲೆಕ್ಕ ಸಹಾಯಕರು, ನರೇಗಾ ಸಿಬ್ಬಂದಿಗಳು, ತಾಂತ್ರಿಕ ಸಹಾಯಕರು, ಡಿ .ಇ .ಓ, ಕರ ವಸೂಲಿಗಾರರು ಸೇರಿದಂತೆ ಇನ್ನಿತರ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು ಹಾಜರಿದ್ದರು, 27-ಮಾನ್ವಿ-02:
ಮಾನ್ವಿ:ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ.ಪಂ. ಇ.ಓ. ಖಾಲೀದ್ ಅಹಮ್ಮದ್ ನೇತೃತ್ವದಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
What's Your Reaction?






