ಪರಿಶಿಷ್ಟ ಪಂಗಡಕ್ಕೆ ಕುರುಬ ಮತ್ತು ಇತರೆ ಸಮುದಾಯಗಳನ್ನು ಸೇರ್ಪಡೆ ವಿರೋಧಿಸಿ ಪ್ರತಿಭಟನೆ
ಮಸ್ಕಿ: ಪರಿಶಿಷ್ಟ ಪಂಗಡಕ್ಕೆ ಕುರುಬ ಮತ್ತು ಇತರೆ ಸಮುದಾಯಗಳನ್ನು ಸೇರ್ಪಡೆಗೊಳಿಸುವ ಯೋಜನೆಯನ್ನು ನಿಲ್ಲಿಸಬೇಕು, ತಕ್ಷಣ ಈಗಾಗಲೇ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಎಸ್‌ಟಿ ಫಲಾನುಭವಿಗಳಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶ ನೀಡಬೇಕು ಎಂಬುದು ಸಮುದಾಯದ ಪ್ರಮುಖ ಬೇಡಿಕೆಯಾಗಿದ್ದು, ಪರಿಶಿಷ್ಟ ಪಂಗಡವು ಬುಡಕಟ್ಟು ಸಮುದಾಯಕ್ಕೆ ಸೇರಿದ್ದು, ಸಮಾಜದಲ್ಲಿ ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಸಾಕಷ್ಟು ಹಿಂದುಳಿದಿದೆ. ಈ ಮೊದಲು ಕೇವಲ ಶೇ.3ರಷ್ಟು ಮಾತ್ರ ಮೀಸಲಾತಿ ಕೊಡಲಾಗುತ್ತಿತ್ತು ಎಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದರು.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವವನ್ನು ವಿರೋಧಿಸಿ ಗುರುವಾರ ಸಮಾಜದವರಿಂದ ಬೃಹತ್ ಪ್ರತಿಭಟನೆ ಪಟ್ಟಣದಲ್ಲಿ ವಾಲ್ಮೀಕಿ ನಡೆಸಿದರು.
ಆದರೆ, ಎಲ್.ಜಿ. ಹಾವನೂರು ವರದಿಯ ನಂತರ ಶೇ.7.5 ಮೀಸಲಾತಿ ಕೊಡುವುದಾಗಿ ಹೇಳಿದ್ದ ಸರಕಾರ ಈವರೆಗೂ
ಕಾರ್ಯಗತವಾಗಿಲ್ಲ. ಇದರ ನಡುವೆ ಬಲಾಡ್ಯ ಸಮುದಾಯ ಮತ್ತು ಇತರೆ ಜಾತಿಗಳನ್ನು ಎಸ್ಟಿಗೆ ಸೇರಿಸಲು ಸಿದ್ಧತೆ ಮಾಡಿರುವುದು ಖಂಡನೀಯ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬಾಲಾಡ್ಯ ಜಾತಿಯೂ ಸೇರಿ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರ ಖಂಡಿಸಿ ಗುರುವಾರದಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ(ರಿ) ಮಸ್ಕಿ ತಾಲೂಕು ಸಮಿತಿಯು ಪ್ರತಿಭಟನೆ ನಡೆಸಿ, ಉಪ ತಹಸೀಲ್ದಾರ್ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವರ ವಿರುದ್ದ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ ವಾಲ್ಮೀಕಿ ವೃತ್ತದವರೆಗೆ ತೆರಳಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ್,ಶ್ರೀ ಆತ್ಮ ನಂದ ಸ್ವಾಮೀಜಿ, ವೆಂಕಟೇಶ ನಾಯಕ, ನಾರಾಯಣಪ್ಪ ಕಾಸ್ಸಿ, ಗೋವಿಂದಪ್ಪ ನಾಯಕ ರಂಗಾಪುರ, ಪ್ರಸನ್ನ ಪಾಟೀಲ್, ವೆಂಕಟೇಶ ನಾಯಕ ಕೋಳಬಾಳ, ಚೇತನ್ ಪಾಟೀಲ್ ಹಾಗೂ ತಾಲೂಕಿನ ಅನೇಕ ಗ್ರಾಮಗಳಿಂದ ಸಮಾಜದ ಮುಖಂಡರು ಹಾಗೂ ಯುವಕರು ಭಾಗಿಯಾಗಿದ್ದರು.
What's Your Reaction?



