ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು: ಆಂಬುಲೆನ್ಸ್ ಧ್ವಂಸ
ಸಾರ್ವಜನಿಕ ವಲಯಗಳಲ್ಲಿ ಕೇಳಿ ಬಂದಿರುವ ವಿಷಯ ಮಸ್ಕಿ ಕ್ಷೇತ್ರ ಅಭಿವೃದ್ಧಿಯಲ್ಲಿ ಶಾಸಕರ ನಿರ್ಲಕ್ಷೆ ..ಕಾರಣ ಮಸ್ಕಿ ಕ್ಷೇತ್ರ ತಾಲೂಕು ಕೇಂದ್ರ ವಾಗಿ ಸುಮಾರು ವರ್ಷ ಕಳೆದರೂ ಕೂಡ ಶಾಸಕ ಆರ್ ಬಸನಗೌಡ ತುರುವಿಹಾಳ ತಾಲೂಕು ಆಸ್ಪತ್ರೆ ಸೇರಿದಂತೆ ತಾಲೂಕು ಕೇಂದ್ರ ಕ್ಕೆ ಸಾರ್ವಜನಿಕರ ಅವಶ್ಯಕ ಸರ್ಕಾರಿ ಕಾರ್ಯಾಲಯಗಳು ನೀಡದಿರುವುದು, ಸಾರ್ವಜನಿಕ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದರಿಂದ ಜನ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರ ಆರೋಪ ಕೇಳಿ ಬಂದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ವೈದ್ಯರನಿರ್ಲಕ್ಷ್ಯದಿಂದಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯಿಂದ ಕುಪಿತರಾದ ಮೃತ ಸಿದ್ದಮ್ಮ ಅವರ ಸಂಬಂಧಿಕರು ಮತ್ತು ಸ್ಥಳೀಯರು ಆಸ್ಪತ್ರೆಯ ಬಳಿಯ ಆಂಬುಲೆನ್ಸ್‌ನನ್ನು ಧ್ವಂಸಗೊಳಿಸಿದ್ದಾರೆ.
ಮಸ್ಕಿಯ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದಮ್ಮ ಎಂಬ ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯಕಾರಣ ಎಂದು ಆರೋಪಿಸಲಾಗಿದೆ. ಈ ಘಟನೆಯಿಂದ ಕುಪಿತರಾದ ಸಂಬಂಧಿಕರು ಮತ್ತು ಸ್ಥಳೀಯರು ಆಸ್ಪತ್ರೆಯನ್ನು ಮುತ್ತಿಗೆ ಹಾಕಿ, ಸ್ತ್ರೀರೋಗ ತಜ್ಞೆ ಡಾ. ಸೌಮ್ಯ ಗುಂಡಳ್ಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಆಸ್ಪತ್ರೆಯ ಬಳಿಯ ಆಂಬುಲೆನ್ಸ್‌ನನ್ನು ಧ್ವಂಸಗೊಳಿಸಲಾಗಿದೆ.
ಘಟನೆಯ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ, ವೈದ್ಯರ ನಿರ್ಲಕ್ಷ್ಯದಿಂದ ಸಂಭವಿಸಿದ ಈ ದುರ್ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆಸ್ಪತ್ರೆಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.
ಮೃತ ಬಾಣಂತಿಯ ಸಂಬಂಧಿಕರು, ಸಹಜ ಹೆರಿಗೆ ಮಾಡಿಸುವುದಾಗಿ ವೈದ್ಯರು ಭರವಸೆ ನೀಡಿದ್ದರು. ಮಗು-ತಾಯಿಯ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್‌ಗೆ ನಾವು ಒಪ್ಪಿಕೊಂಡೆವು. ಮನೆಗೆ ಕರೆದುಕೊಂಡು ಹೋಗಿ ನಾಲ್ಕು ದಿವಸ ಆದ ನಂತರ ಮರಳಿ ಜ್ವರ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸರಿಯಾದ ಚಿಕಿತ್ಸೆ ನೀಡದೆ ವೈದ್ಯರ ನಿರ್ಲಕ್ಷ್ಯದಿಂದಲೇ ಈ ಮರಣ ಸಂಭವಿಸಿದೆ ಎಂದು ಬಾಣಂತಿಯ ಸಂಬಂಧಿಕರು, ಡಾ. ಸೌಮ್ಯ ಗುಂಡಳ್ಳಿ ಮತ್ತು ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಸಿದ್ದಮ್ಮ ಅವರ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.
ಈ ಘಟನೆಯಿಂದ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯ ಗುಣಮಟ್ಟದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಈ ಹಿಂದೆ ಇದೇ ತರಹದ ಘಟನೆಗಳು ನಡೆದಿರುವುದರಿಂದ ಸ್ಥಳೀಯರು ತನಿಖೆಗೆ ಒತ್ತಾಯಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ನಂತರ ಡಿಎಚ್‌ಒ ಸುರೇಂದ್ರಬಾಬು ಹಾಗೂ ನೋಡಲ್ ಅಧಿಕಾರಿಗಳು ಸಿಪಿಐ, ತಹಶೀಲ್ದಾರ್ ಒಳಗೊಂಡು ಆಸ್ಪತ್ರೆಗೆ ಬೀಗಮುದ್ರೆ ಹಾಕಿ, ಮುಂದಿನ ಹಂತದಲ್ಲಿ ತನಿಖೆಯನ್ನು ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಭರವಸೆ ನೀಡಿದರು.
ಆರೋಗ್ಯ ಮತ್ತು ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಡಾ.ಶಿವಕುಮಾರ್, ಲಿಂಗಸುಗೂರು ತಾಲೂಕು ವೈದ್ಯಾಧಿಕಾರಿ ಅಮರೇಶ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಧರಣಿಯಿಂದ ಉಂಟಾಗಿದ್ದ ಬಿಗುವಿನ ವಾತಾವರಣ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟರು
ಇದಕ್ಕೆಲ್ಲ ಕಾರಣ ಮಸ್ಕಿ ಕ್ಷೇತ್ರ ತಾಲೂಕು ಕೇಂದ್ರ ವಾಗಿ ಸುಮಾರು ವರ್ಷ ಕಳೆದರೂ ಕೂಡ ಶಾಸಕ ಆರ್ ಬಸನಗೌಡ ತುರುವಿಹಾಳ ತಾಲೂಕು ಆಸ್ಪತ್ರೆ ಸೇರಿದಂತೆ ತಾಲೂಕು ಕೇಂದ್ರ ಕ್ಕೆ ಸಾರ್ವಜನಿಕರ ಅವಶ್ಯಕ ಸರ್ಕಾರಿ ಕಾರ್ಯಾಲಯಗಳು ನೀಡದಿರುವುದು,
ಸಾರ್ವಜನಿಕ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದರಿಂದ ಜನ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರ ಆರೋಪ ಕೇಳಿ ಬಂದಿದೆ.
ಈ ಘಟನೆಯಿಂದ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯ ಗುಣಮಟ್ಟದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಸ್ಥಳೀಯರು ತನಿಖೆಗೆ ಒತ್ತಾಯಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಘಟನೆಯು ರಾಯಚೂರಿನಲ್ಲಿ ವೈದ್ಯಕೀಯ ಸೇವೆಗಳ ಸುರಕ್ಷತೆ ಮತ್ತು ಜವಾಬ್ದಾರಿಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
What's Your Reaction?






