ಸಾರಿಗೆ ನಿಗಮದ ನೌಕರರು ನಿಯಮಿತ ಆರೋಗ್ಯ ತಪಾಸಣೆ ಕೈಗೊಳ್ಳಿ: ಡಾ.ಸುರೇಂದ್ರಬಾಬು
ರಾಯಚೂರು ಸೆಪ್ಟೆಂಬರ್ 09 : ಜೀವನ ಶೈಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಸಂಭವನೀಯ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯುವ ಮೂಲಕ ಸದೃಢ ಆರೋಗ್ಯವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸುರೇಂದ್ರಬಾಬು ಹೇಳಿದರು. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 9ರಂದು ನಡೆದ ಅಸಾಂಕ್ರಾಮಿಕ ರೋಗಗಳ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಯಚೂರು ಸೆಪ್ಟೆಂಬರ್ 09 : ಜೀವನ ಶೈಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಸಂಭವನೀಯ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯುವ ಮೂಲಕ ಸದೃಢ ಆರೋಗ್ಯವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸುರೇಂದ್ರಬಾಬು ಹೇಳಿದರು.
ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 9ರಂದು ನಡೆದ ಅಸಾಂಕ್ರಾಮಿಕ ರೋಗಗಳ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅತಿಯಾದ ಕೊಬ್ಬಿನಂಶ ಪದಾರ್ಥಗಳ ಬಳಕೆ, ವ್ಯಾಯಾಮದಡೆ ನಿರಾಸಕ್ತಿ, ತಂಬಾಕು, ಆಲ್ಕೋಹಾಲ್ ನಂತಹ ಪದಾರ್ಥಗಳ ಬಳಕೆಯಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆಯಂತಹ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕಾಗಿ ಇಂದಿನಿAದಲೆ ಜಾಗರೂಕರಾಗಬೇಕಿದೆ. ಅದರಲ್ಲೂ ರಸ್ತೆ ಸಾರಿಗೆ ನಿಗಮದ ನೌಕರರು ದೂರು ಪ್ರಯಾಣ, ಬಿಡುವಿಲ್ಲದ ಕೆಲಸ ನಿರ್ವಹಣೆಯಂತಹ ಕಾರ್ಯದೊತ್ತಡದಡಿ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಲು ವಿನಂತಿಸಿದರು.
ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಘಟಕ, ರಿಮ್ಸ್ ಎನ್‌ಸಿಡಿ ವಿಭಾಗದ ಮೂಲಕ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ನೌಕರರಿಗೆ ವಾರದವರೆಗೆ ಜಿಲ್ಲೆಯ ಎಲ್ಲ ತಾಲೂಕು ಒಳಗೊಂಡAತೆ 08 ಡಿಪೋಗಳು, 2 ಜಿಲ್ಲಾ ಮಟ್ಟದ ಕಚೇರಿಯಲ್ಲಿ ಕಾರ್ಯನಿರ್ವಹಿಸುವ 2510 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ ಎಮ್.ಎಸ್. ಮಾತನಾಡಿ, ನಿಗಮದ ರಜತ ಮಹೋತ್ಸವವು ಜರುಗುತ್ತಿದ್ದು, ವಾಹನ ಚಾಲಕರು, ನಿರ್ವಾಹಕರು ಹಾಗೂ ಡಿಪೋಗಳಲ್ಲಿ ತಾಂತ್ರಿಕ ಸಿಬ್ಬಂದಿಯು ಲಕ್ಷಾಂತರ ಸಾರ್ವಜನಿಕರಿಗೆ ರಾಜ್ಯ, ಅಂತರಾಜ್ಯ ಸೇರಿದಂತೆ ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವ ಮಹತ್ವಪೂರ್ಣ ಕಾರ್ಯ ಮಾಡುತ್ತಿದ್ದು, ವಾಹನಗಳ ನಿಯಮಿತ ದುರಸ್ತಿ ಕೈಗೊಳ್ಳುವ ಜೊತೆಗೆ ಆರೋಗ್ಯದ ಕಡೆಗೂ ಗಮನ ನೀಡಿ ಎಂದು ತಿಳಿಸಿದರು. ಪ್ರಸ್ತುತ ಪಾಳೆಯ ಅನುಸಾರ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದ್ದು ಇದರ ಸದುಪಯೋಗ ಪಡೆಯಲು ಕೋರಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಗಣೇಶ್ ಕೆ ಅವರು ಪ್ರಾಸ್ತಾವಿಕ ಮಾತನಾಡಿ, ಪ್ರಸ್ತುತ ಜಿಲ್ಲೆಯ 4 ತಾಲೂಕು ಸಾರ್ವಜನಿಕ ಆಸ್ಪತ್ರೆ, 6 ಸಿಹೆಚ್‌ಸಿಗಳು, ರಿಮ್ಸ್ ಸೇರಿದಂತೆ ಒಟ್ಟು 11 ಆಸ್ಪತ್ರೆಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ ಘಟಕ ಕಾರ್ಯನಿರ್ವಹಿಸುತ್ತಿದ್ದು, ಅಲ್ಲದೆ ಎಲ್ಲ ಪ್ರಾಥಮಿಕ ಅರೋಗ್ಯ ಕೇಂದ್ರಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮೀಣ ಭಾಗದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ, ಸಹ ತಪಾಸಣೆ, ನಿಗಾವಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಔಷಧಿಗಳನ್ನು ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಮಟ್ಟದಲ್ಲಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ ಗಣೇಶ್ ಕೆ, ರಿಮ್ಸ್ ಎನ್‌ಸಿಡಿ ವಿಭಾಗದ ಪಿಜಿಷಿಯನ್ ಡಾ ಶ್ರೀನಿವಾಸ್, ವಿಭಾಗೀಯ ಸಂಚಾರಿ ಅಧಿಕಾರಿ ಕೆ.ಎಲ್. ಚಂದ್ರಶೇಖರ್, ಜಹೀರಾಬಾದ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ವೇತಾಂಭರಿ, ಕಾರ್ಮಿಕ ಅಧಿಕಾರಿ ಆಶ್ರಪ್ ಅಲಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಎನ್‌ಸಿಡಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ.ಮೇಘಾ ರೆಡ್ಡಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಆಡಳಿತ ಅಧಿಕಾರಿ ದೇವರಾಜ್, ಸಹಾಯಕ ಉಗ್ರಾಣ ಅಧಿಕಾರಿ ಮಹಾಂತೇಶ, ಔಷಧಿ ತಜ್ಞರು ಪರ್ವತಯ್ಯ ಹಿರೇಮಠ ಸೇರಿದಂತೆ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ಸಿಬ್ಬಂದಿ, ಆರೋಗ್ಯ ಇಲಾಖೆಯ ತಪಾಸಣಾ ಸಿಬ್ಬಂದಿ ಉಪಸ್ಥಿತರಿದ್ದರು.
What's Your Reaction?






