ಕರ್ನಾಟಕ ನಾಮಕರಣಕ್ಕೆ .೫೦ರ, ಸಂಭ್ರಮ ಹೆಸರಾಯಿತು ಕರ್ನಾಟಕ : ಉಸಿರಾಗಲಿ ಕನ್ನಡ ಸಿ. ಎಂ. ಸಿದ್ದು.
ರಾಯಚೂರು ಗೋಕಾಕ್ ಚಳುವಳಿ ಹಿನ್ನೋಟ ಮುನ್ನೋಟ ಕಾರ್ಯಕ್ರಮ ಯಶಸ್ವಿ
ರಾಯಚೂರು,ಅ,5: ಕನ್ನಡ ಮತ್ತು
ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ `ರಾಯಚೂರು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಉದೇಶ ರಾಜ್ಯದಲ್ಲಿ ಕನ್ನಡ ಭಾಷೆ ಗಟ್ಟಿಯಾಗಿ ಉಳಿಯಬೇಕು ಹಾಗೂ ಬೆಳೆಯಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಡೀ ವರ್ಷ ರಾಜ್ಯದ ಮೂಲೆ ಮೂಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ "ಕನ್ನಡ ಸಂಭ್ರಮ ೫೦ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ"ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಆಡಳಿತದಲ್ಲಿ ಕನ್ನಡ ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದರು. ಇಲ್ಲಿನೆಲೆಸಿರುವಎಲ್ಲರೂ ಕನ್ನಡಿಗರೇ.
ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ.ಕನ್ನಡ ಅಗ್ರಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದರು.
ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದರು.
ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು. ನಾನು ಕಾವಲು ಸಮಿತಿ | ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್‌ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್‌ಗಳನ್ನು ಕೊಡ್ತಿದ್ದೆ | ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.
ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು. ಕನ್ನಡ ಕಾಯುವ ಕೆಲಸ ಹಾಗೂ ಆಡಳಿತದಲ್ಲಿ ಕನ್ನಡ ಜಾರಿಗೆ ತರುವ ಕೆಲಸವನ್ನು ಮಾಡಬೇಕಾಗಿದೆ. | ನಾನು ಯಾವುದೇ ಕಡತಕ್ಕೆ ಸಹಿಯನ್ನು ಕನ್ನಡದಲ್ಲಿಯೇ ಹಾಕುತ್ತೇನೆ.
ಕೇಂದ್ರ ಅಥವಾ ಹೊರ ರಾಜ್ಯಕ್ಕೆ ಕಡತ ಪತ್ರ ಕಳಿಸಿದರೆ ಮಾತ್ರ ಇಂಗ್ಲಿಷನಲ್ಲಿ ಸಹಿ ಹಾಕುತ್ತೇನೆ ಎಂದರು. ಇಂಗ್ಲಿಷ್ ಸೇರಿದಂತೆ ಯಾವುದೇ ಭಾಷೆ ಕಲಿಯಲು ನಮ್ಮ ವಿರೋಧವಿಲ್ಲ. ಅದರೆ ರಾಜ್ಯದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನ ಸಿಬೇಕೆಂಬುವುದು ನಮ್ಮ ಅನಿಸಿಕೆಯಾಗಿದೆ. ಕನ್ನಡದಲ್ಲಿ ತಂತ್ರಜ್ಞಾನ ಬೆಳೆದಿದೆ ಈ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ರಾಜ್ಯದಲ್ಲಿ ವಾಸಿಸುವ ಎಲ್ಲಾರು ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಮಾತನಾಡುವ | ವಾತಾವರಣ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ ಎಂದರು. ಕನ್ನಡಿಗರು ಭಾಷೆ ಬಗ್ಗೆ ದಾರಿಗಳು ಆಗಬಾರದು ಮಾತೃಭಾಷೆಗೆ ದಕ್ಕೆ ಬರುವಂತ ಯಾವುದೇ ಕೆಲಸ ಮಾಡಬಾರದು. ಈನೆಲದ ರಾಜ್ಯದ ಭಾಷೆಗೆ ಆದ್ಯತೆ ಇರಬೇಕು. ರಾಜ್ಯದಲ್ಲಿ ವಾಸಿಸುವ ಎಲ್ಲಾರು ಕನ್ನಡಿಗರೇ ಕನ್ನಡವನ್ನು ಉಳಿಸಿ-ಬೆಳೆಸುವ ಕೆಲಸ ಮಾಡಬೇಕೆಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಹಿರಿಯ ಕನ್ನಡ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು | ಮುಖ್ಯಮಂತ್ರಿಗಳು ಸನ್ಮಾನಿಸಿದರು.ವೇದಿಕೆ ಮೇಲೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಎನ್.ಎಸ್. ಬೋಸರಾಜು, ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಶಿವರಾಜ್ ತಂಗಡಿಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಲ್, ವಿಧಾನಪರಿಷತ್ ಸದಸ್ಯರಾದ ಎ.ವಸಂತ ಕುಮಾರ, ಶರಣಗೌಡ ಬಯ್ಯಾಪೂರ, ಡಿಸಿಸಿ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಆಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಕೃವಿವಿ ಕುಲಪತಿ | ಹನುಮಂತಪ್ಪ, ರಾಯಚೂರು ವಿವಿ ಕುಲಪತಿ ಪ್ರೋ. ಹರೀಶ್ ರಾಮಸ್ವಾಮಿ, ಕನ್ನಡ ಅಭಿವೃದ್ಧಿ | ಪ್ರಾಧಿಕಾರ್ಯದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್, ಜಿಲ್ಲಾಧಿಕಾರಿ ನಿತೀಶ್, ಜಿ.ಪಂ.ಸಿಇಓ ಪಾಡ್ಡೆ ರಾಹುಲ್ ತುಕಾರಾಮ, ಎಸ್ಪಿ ಪುಟ್ಟಮಾದಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
What's Your Reaction?