ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು
ಬಳಗಾನೂರು ಪಟ್ಟಣದಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಮಲ್ಲಪ್ಪ ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಬಳಗಾನೂರ . ಪಟ್ಟಣದ ನಿವಾಸಿ ಮಲ್ಲಪ್ಪ ಬಡಿಗೇರ್ (54) ಮೃತರು.
ಬಳಗಾನೂರ ಪಟ್ಟಣದ ಹೊರವಲಯದಲ್ಲಿ ಸಂಜೆ 4.30 ಗಂಟೆ ಸುಮಾರಿಗೆ ಘಟನೆ ಜರುಗಿದ್ದು, ಸ್ಥಳಕ್ಕೆ ಬಳಗಾನೂರು ಠಾಣೆಯ ಪೋಲಿಸ ಅಧಿಕಾರಿಗಳು.ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ
What's Your Reaction?